ಅಂಬೇಡ್ಕರ್ ಜಯಂತಿ: ಪೂರ್ವ ಭಾವಿ ಸಭೆ ಮಾ.೧೮ ರಂದು

ಬೆಳಗಾವಿ: ಮಾರ್ಚ್ ೧೪ ರಂದು ಭಾರತರತ್ನ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೨೯ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಆಡಳಿತ ವತಿಯಿಂದ ಆಚರಿಸುವ ಕುರಿತು ಮಾರ್ಚ ೧೮ ರಂದು ಸಾಯಂಕಾಲ ೩.೩೦ ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಛೇರಿಯ ೨ ನೇ ಮಹಡಿಯಲ್ಲಿ ಪೂರ್ವಭಾವಿ ಸಿದ್ದತಾ ಸಭೆಯನ್ನು ಆಯೋಜಿಸಲಾಗಿದೆ.
ಈ ಸಭೆಗೆ ಜಿಲ್ಲೆಯ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಹಾಗೂ ಇತರೆ ವರ್ಗಗಳ ಸಮುದಾಯದ ಮುಖಂಡರು ಪದಾಧಿಕಾರಿಗಳು ಆಗಮಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Share
WhatsApp
Follow by Email