ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಮತ್ತೆ ಅಬ್ಬರಿಸಿ ಕೊರೋನಾ, ಇಂದು ಒಂದೇ ದಿನ 116 ಪ್ರಕರಣಗಳು ಪತ್ತೆ

ರಾಜ್ಯದಲ್ಲಿ ಕೊರೊನಾ ಮತ್ತೆ ಅಬ್ಬರಿಸಿದ್ದು, ಇಂದು ಒಂದೇ ದಿನ 116 ಸೋಂಕು ಪ್ರಕರಣಗಳು ಕಂಡು ಬಂದಿವೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 1578 ಕ್ಕೆ ಏರಿಕೆಯಾಗಿದೆ.
ಲಾಕ್‌ ಡೌನ್‌ ಸಡಿಲಿಕೆ ಬಳಿಕ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇದು ಯಾವ ಹಂತ ತಲುಪಲಿದೆ ಎಂಬ ಕಳವಳಕ್ಕೆ ಕಾರಣವಾಗಿದೆ. ಈಗಾಗಲೇ ಬಿಎಂಟಿಸಿ, ಕೆ.ಎಸ್.‌ಆರ್.‌ಟಿ.ಸಿ. ಹಾಗೂ ಖಾಸಗಿ ಬಸ್‌ ಸಂಚಾರದ ಜೊತೆಗೆ ಟ್ಯಾಕ್ಸಿ-ಆಟೋ ಸಂಚಾರಕ್ಕೂ ಅನುಮತಿ ನೀಡಲಾಗಿದೆ. ಆದರೆ ಸಾಮಾಜಿಕ ಅಂತರ ಸೇರಿದಂತೆ ಸರ್ಕಾರ ನೀಡಿರುವ ನಿರ್ದೇಶನಗಳನ್ನು ಕೆಲವರು ಸರಿಯಾಗಿ ಪಾಲಿಸುತ್ತಿಲ್ಲವೆಂಬ ಸಂಗತಿ ಬಹಿರಂಗವಾಗಿದ್ದು, ಇದು ಆತಂಕಕ್ಕೆ ಕಾರಣವಾಗಿದೆ.
ಮೇ 25 ರಿಂದ ದೇಶಿಯ ವಿಮಾನ ಸಂಚಾರ ಆರಂಭವಾಗಲಿದ್ದು, ಜೂನ್‌ 1 ರಿಂದ 200 ರೈಲುಗಳ ಓಡಾಟಕ್ಕೆ ಕೇಂದ್ರ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ
ಹೀಗಾಗಿ ಮುಂದಿನ ದಿನಗಳಲ್ಲೂ ಕೊರೊನಾ ಮತ್ತಷ್ಟು ವ್ಯಾಪಿಸಲಿದೆ ಎನ್ನಲಾಗುತ್ತಿದ್ದು, ಸಾರ್ವಜನಿಕರು ಜಾಗ್ರತೆ ವಹಿಸಬೇಕಾಗಿರುವುದು ಅನಿವಾರ್ಯವಾಗಿದೆ. ಒಂದೊಮ್ಮೆ ನಿರ್ಲಕ್ಷ್ಯ ವಹಿಸಿದರೆ ಅದಕ್ಕೆ ಬೆಲೆ ತೆರಬೇಕಾಗುತ್ತದೆ.

About the author

Mallu Bolanavar